true24news.com
ಅಪರಾಧ

ಆಟೋ -ಜೀಪು ಭೀಕರ ಅಪಘಾತ; ನಾಲ್ವರಿಗೆ ಗಂಭೀರ ಗಾಯ..

ಸಿದ್ದಾಪುರ ಸಮೀಪದ ಅಭ್ಯತ್ ಮಂಗಲ (ಒಂಟಿಯಂಗಡಿ) ಬಳಿ ಆಟೋ ರಿಕ್ಷಾ ಹಾಗೂ ಜೀಪು ನಡುವೆ ಭಾನುವಾರ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಆಟೋ ಚಾಲಕ ಸೇರಿದಂತೆ ಆಟೋದಲ್ಲಿದ್ದ ಮೂವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.ಜೀಪ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆಂದು ತಿಳಿದುಬಂದಿದ್ದು, ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.ಅಪಘಾತದ ಮಾಹಿತಿ ಪಡೆದ ಚೆಟ್ಟಳ್ಳಿ ಪೊಲೀಸ್ ಠಾಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಗಾಯಾಳುಗಳನ್ನು ತಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

Related posts

ಪತ್ನಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ

True News

ರಂಜಿತಾ ಹತ್ಯೆ ಕೇಸ್: ಮೃತ ಮಹಿಳೆ ಕುಟುಂಬಕ್ಕೆ ಪರಿಹಾರ ಘೋಷಿಸಿದ ಬಿ.ವೈ ವಿಜಯೇಂದ್ರ…

True News

ವೈನ್ ಶಾಪ್ ಸಮೀಪ ಭಾರೀ ಅಗ್ನಿ ಅವಘಡ – ಪೆಟ್ ಸಾರಾಯಿ ಪ್ಯಾಕೆಟ್‌ಗಳಿಗೆ ಬೆಂಕಿ, ಕಾರುಗಳು ಭಸ್ಮ

True News

Leave a Comment