true24news.com
ಅಪರಾಧ ಕರ್ನಾಟಕ ಸುದ್ದಿ

ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!

ಗದಗ ನಗರದ ಹೊಂಬಳ ರಸ್ತೆಯ ಸರ್ವಜ್ಞ ಸರ್ಕಲ್ ಬಳಿ ಕಡಲೆ ಕಳ್ಳತನ ಪ್ರಕರಣದಲ್ಲಿ ರೈತರು ಕಳ್ಳನನ್ನು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ನಡೆದಿದೆ. ಬೆಳಗಿನ ಜಾವ ಜಮೀನಿನಲ್ಲಿ ಕಡಲೆ ಕಳ್ಳತನ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ವಾಯುವಿಹಾರಕ್ಕೆ ಬಂದ ಜನರ ಕಣ್ಣಿಗೆ ಕಳ್ಳ ಬಿದ್ದಿದ್ದು, ತಕ್ಷಣ ರೈತರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಧಾವಿಸಿದ ರೈತರು ಕಳ್ಳನನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಧರ್ಮದೇಟು ನೀಡಿದ್ದಾರೆ. ಕಳೆದ ಹಲವು ದಿನಗಳಿಂದ ರೈತರ ಜಮೀನುಗಳಲ್ಲಿ ಕಡಲೆ ಕಳ್ಳತನ ನಡೆಯುತ್ತಿದ್ದು, ಇದರಿಂದ ರೈತರು ಕಂಗಾಲಾಗಿದ್ದರು ಎನ್ನಲಾಗಿದೆ. ಆಕ್ರೋಶಗೊಂಡ ರೈತರು ಕಳ್ಳನ ತಲೆ ಹಾಗೂ ಕೊರಳಿಗೆ ಕಡಲೆ ಗಿಡಗಳ ಮಾಲೆ ಹಾಕಿ ಪಾಠ ಕಲಿಸಿದ್ದಾರೆ. ಮಾಹಿತಿ ಪಡೆದ ಗದಗ ಗ್ರಾಮೀಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Related posts

ಸಾರ್ವಜನಿಕರ ‘ವಾಹನ ತಪಾಸಣೆ’ ವೇಳೆ ದುರ್ನಡತೆ ತೋರುವ ರಾಜ್ಯದ ಟ್ರಾಫಿಕ್ ಪೊಲೀಸರಿಗೆ ಖಡಕ್ ಸೂಚನೆ.!

Admin

ಡಿಕ್ಕಿ ಹೊಡೆದ ಕಾರು; ಕ್ಷಣಾರ್ಧದಲ್ಲಿ ಬೆಂಕಿಗಾಹುತಿ!

True News

ಕೌಟುಂಬಿಕ ಕಲಹ : 10 ತಿಂಗಳ ಮಗುವಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಾಯಿ..

True News

Leave a Comment